Friday, January 30, 2026
Google search engine
Homeಮುಖಪುಟದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಣೆ - ಸಿದ್ದರಾಮಯ್ಯ

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಣೆ – ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ಫೇಸ್ಬುಕ್ ನಲ್ಲಿ ಬರೆದಿದ್ದಾರೆ.

ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular