Friday, September 20, 2024
Google search engine
Homeಮುಖಪುಟರಸ್ತೆ ಅಪಘಾತದಲ್ಲಿ ಬೆಳಗಲ್ ವೀರಣ್ಣ ಸಾವು -ಗಣ್ಯರ ಕಂಬನಿ

ರಸ್ತೆ ಅಪಘಾತದಲ್ಲಿ ಬೆಳಗಲ್ ವೀರಣ್ಣ ಸಾವು -ಗಣ್ಯರ ಕಂಬನಿ

ಹಿರಿಯ ರಂಗಭೂಮಿ ಕಲಾವಿದ ಹಾಗೂ ಗೊಂಬೆಯಾಟದ ಕಲಾವಿದ ಬೆಳಗಲ್ ವೀರಣ್ಣ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಪುತ್ರ ಹನುಮಂತ ಅವರೊಂದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯ ಕಲಾವಿದ ಬೆಳಗಲ್ ವೀರಣ್ಣ ಅಗಲಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ವೀರಣ್ಣ ಅವರು ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವುದು ನನಗೆ ಬಹಳ ನೋವನ್ನು ಉಂಟು ಮಾಡಿದೆ. ಅವರ ಅಗಲಿಕೆ ಕಲಾಜಗತ್ತಿಗೆ ಆಗಿರುವ ದೊಡ್ಡ ನಷ್ಟ ಎಂದು ಹೇಳಿದ್ದಾರೆ.

ನಾಡೋಜ, ಕರ್ನಾಟಕ ರಾಜ್ಯೋತ್ಸವ‌, ಜಾನಪದ ಅಕಾಡೆಮಿ ಪಶಸ್ತಿ ಸೇರಿ ಅನೇಕ ಗೌರವಗಳಿಗೆ ಪಾತ್ರರಾಗಿದ್ದ ಅವರು, ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದಯಪಾಲಿಸಲೆಂದು ಸಿಎಂ ಪ್ರಾರ್ಥಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್ಬುಕ್ ನಲ್ಲಿ ಬೆಳಗಲ್ ವೀರಣ್ಣ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ತೊಗಲು ಬೊಂಬೆಯಾಟದ ಮಾಂತ್ರಿಕ, ಹಿರಿಯ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಅವರ ಸಾವಿನಿಂದ ಆಘಾತಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಇನ್ನಷ್ಟು ದಿನ ಅವರ ಕಲಾಸೇವೆಯ ಅಗತ್ಯವಿತ್ತು. ವೀರಣ್ಣ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular