Tuesday, December 24, 2024
Google search engine
Homeಮುಖಪುಟನಂದಿನಿಯನ್ನು ಆಪೋಷನ ತೆಗೆದುಕೊಳ್ಳಲು ಮೋದಿ, ಶಾ ಸಂಚು - ಸಿದ್ದರಾಮಯ್ಯ ಆರೋಪ

ನಂದಿನಿಯನ್ನು ಆಪೋಷನ ತೆಗೆದುಕೊಳ್ಳಲು ಮೋದಿ, ಶಾ ಸಂಚು – ಸಿದ್ದರಾಮಯ್ಯ ಆರೋಪ

ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಹೇಳಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ ಎಂದರು.

ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ಎಂದು ಕೇಳಿದ್ದಾರೆ.

ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular