ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ 25 ಹಾಲಿ ಶಾಸಕರು ಹಾಗೂ ಸಚಿವರಿಗೆ ಟಿಕೆಟ್ ನೀಡದೇ ಇರಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪವರ್ ಟಿವಿ ವರದಿ ಮಾಡಿದೆ.
ಭ್ರಷ್ಟಾಚಾರದ ಆರೋಪ ಹೊತ್ತು ಜೈಲಿನಲ್ಲಿರುವ ಚನ್ನಗಿರಿ ಕ್ಷೇತ್ರದ ಹಾಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ, ಸೊರಬಾ ಕ್ಷೇತ್ರದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡದೇ ಇರಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಎಸ್.ಸುರೇಶ್ ಕುಮಾರ್, ಶಾಸಕ ರವಿಸುಬ್ರಹ್ಮಣ್ಯ ಅವರಿಗೂ ಟಿಕೆಟ್ ತಪ್ಪುವ ಭೀತಿ ಎದುರಾಗಿದೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜಿ.ಎಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಅವರಿಗೂ ಬಿಜೆಪಿಯಿಂದ ಟಿಕೆಟ್ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.