ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್ ಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಆರ್. ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದ್ದಾರೆ.
ಆರ್.ಶಂಕರ್ ಅವರು ಎಂಎಲ್.ಸಿ ಸ್ಥಾನಕ್ಕೆ ರಾಜಿನಾಮೆ ನೀಡಿ ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕೆ ಇಳಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.