ನನ್ನ ಮಗಳು ಭಾರತೀಯ ಜನತಾ ಪಕ್ಷವನ್ನು ಸೇರಿದ್ದು ನನಗೆ ಗೊತ್ತೇ ಇಲ್ಲ. ನಾನೇನಿದ್ದರೂ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ.
ನಾನೇನಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಮಗಳು ಬಿಜೆಪಿ ಸೇರಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಅವಳು ನನ್ನ ಎದೆಗೆ ಚೂರಿ ಹಾಕಿದ್ದಾಳೆ. ಇದು ಶಾಸಕ ಹರತಾಳು ಹಾಲಪ್ಪನ ಚುನಾವಣೆ ತಂತ್ರ. ನಾನು ಅವಳ ಜತೆ ಮಾತನಾಡುತ್ತೇನೆ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡುವುದಿಲ್ಲ ಎಂದು ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.