Monday, September 16, 2024
Google search engine
Homeಮುಖಪುಟಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ

ಅಥಣಿ ಕ್ಷೇತ್ರದ ಟಿಕೆಟ್ ಸಿಗದೇ ಇರುವುದಕ್ಕೆ ಬೇಸರಗೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲಕ್ಷ್ಮಣ್ ಸವದಿ ಅವರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.

ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರಿದ್ದಾರೆ.ನಮ್ಮ ಕುಟುಂಬದ ಸದಸ್ಯರಾಗಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ ಎಂದರು.

ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular