Thursday, September 19, 2024
Google search engine
Homeಮುಖಪುಟಕಾಂಗ್ರೆಸ್ 3ನೇ ಪಟ್ಟಿ ಪ್ರಕಟ - ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರದ ಟಿಕೆಟ್

ಕಾಂಗ್ರೆಸ್ 3ನೇ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರದ ಟಿಕೆಟ್

ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಏಪ್ರಿಲ್ 15ರಂದು ತನ್ನ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೊನ್ನೆ ತಾನೆ ಬಿಜೆಪಿ ತೊರೆದು ಏ.14ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರಿಗೆ ಅಥಣಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡನೇ ಕ್ಷೇತ್ರ ಕೋಲಾರಕ್ಕೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್ ಎಂಬುವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಹಾಸನ ಜಿಲ್ಲೆಯ ಅರಸಿಕೆರೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಟಿಕೆಟ್ ನೀಡಿದೆ. ಹಾಸನ ಕ್ಷೇತ್ರಕ್ಕೆ ಬನವಾಸಿ ರಂಗಸ್ವಾಮಿ ಅವರಿಗೆ ಟಿಕೆಟ್ ನೀಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಷಣ್ಮುಖಪ್ಪ ಯಾದವ್ ಅವರಿಗೆ ಟಿಕೆಟ್ ದೊರೆತಿದೆ.

ತೇರದಾಳ್ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಟಿಕೆಟ್ ಕೈತಪ್ಪಿದ್ದು, ಇವರ ಬದಲಿಗೆ ಸಿದ್ದಪ್ಪ ರಾಮಪ್ಪ ಕೊನ್ನೂರು ಅವರಿಗೆ ಟಿಕೆಟ್ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular