ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಶಿರಸಿಗೆ ತೆರಳಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರಿಗೆ ರಾಜಿನಾಮೆ ನೀಡಿದರರು.
ಈ ಸಂದರ್ಭದಲ್ಲಿ ಮಾತನಾಡಿದ ಶೆಟ್ಟರ್ ನನ್ನನ್ನು ಬಿಜೆಪಿ ನಾಯಕರು ನಡೆಸಿಕೊಂಡಿರುವ ರೀತಿ ನನಗೆ ನೋವು ತಂದಿದೆ. ಓರ್ವ ಹಿರಿಯ ನಾಯಕನಿಗೆ ಹೀಗೆ ಮಾಡಿದರೆ ಏನು ಹೇಳಬೇಕು ಎಂಬುದು ನನಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.
ನಾನು ಯಾವುದೇ ಸಚಿವ ಸ್ಥಾನ, ಮುಖ್ಯಮಂತ್ರಿ ಸ್ಥಾನ, ಉನ್ನತ ಸ್ಥಾನವನ್ನು ಕೇಳುವುದಿಲ್ಲ. ನನಗೆ ಕ್ಷೇತ್ರದ ಜನರ ಸೇವೆ ಮಾಡಲು ಕೇವಲ ಶಾಸಕನಾಗಿ ಇರುತ್ತೇನೆ ಎಂದು ಮನವಿ ಮಾಡಿದರೂ ಅವರು ಒಪ್ಪಿಗೆ ಸೂಚಿಸಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ನನ್ನ 40 ವರ್ಷಗಳ ರಾಜಕೀಯ ದಿನದಲ್ಲಿ ಕರಾಳ ದಿನವಾಗಿದೆ. ನಾನು ಚುನಾವಣೆಗೆ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ನನ್ನ ಹಿತೈಷಿಗಳು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.