Monday, December 23, 2024
Google search engine
Homeಮುಖಪುಟನಾಲ್ಕನೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾಲ್ಕನೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಮಂಗಳವಾರ ಬಿಡುಗಡೆ ಮಾಡಿದ್ದು 7 ಕ್ಷೇತ್ರಗಳಿಗೆ ಸ್ಪರ್ಧಿಗಳನ್ನು‌ ಘೋಷಿಸಿದೆ.

ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರಕ್ಕೆ ಮುಹಮ್ಮದ್ ಯೂಸುಫ್ ಸವಣೂರು ಹೆಸರು ಘೋಷಣೆ ಮಾಡಲಾಗಿದೆ.

ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್‌ ಮಾಡಿತ್ತು.

ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್‌ ನೀಡಿದೆ. ಮಂಗಳವಾರ ಮತ್ತೆ ಏಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ..

ಹುಬ್ಬಳ್ಳಿ -ಧಾರವಾಡ ಕೇಂದ್ರ- ಜಗದೀಶ್ ಶೆಟ್ಟರ್

ಶಿಗ್ಗಾಂವಿ- ಮುಹಮ್ಮದ್ ಯೂಸುಫ್

ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ

ಹರಿಹರ- ನಂದಗವಿ ಶ್ರೀನಿವಾಸ್

ಚಿಕ್ಕಮಗಳೂರು- ಎಚ್. ಡಿ ತಮ್ಮಯ್ಯ

ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ

ಲಿಂಗಸುಗೂರು- ದುರ್ಗಪ್ಪ ಎಸ್.ಹೊಳಗೇರಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular