ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು ಬಿಎ, ಬಿಇಡಿ, ಎಂಎಸ್.ಸಿ, ಎಂ.ಎ ಹಾಗೂ ವಿದ್ವತ್ ಪೂರ್ಣಗೊಳಿಸಿ ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಬಸವ ಜಯಂತಿಯಂದು ಮಠದಲ್ಲಿ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮನೋಜ್ ಕುಮಾರ್ ಅವರು ಸಿದ್ದಗಂಗಾ ಮಠಧ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆಯಲಿದ್ದಾರೆ.