ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ eಚ್.ವಿ. ದರ್ಶನ್ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಧನಿಯಾಕುಮಾರ್, ಜಯಸಿಂಹರಾವ್, ನರಸಿಂಹಯ್ಯ, ಮಲ್ಲಿಕಾರ್ಜುನಯ್ಯ ಹೆಬ್ಬಾಕ ಈ ಸಂದರ್ಭದಲ್ಲಿ ಇದ್ದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ಅವರು ಸಾಂಕೇತಿಕವಾಗಿ ಚುನಾವಣಾಧಿಕಾರಿ ಹೋಟೆಲ್ ಶಿವಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
ಮುಖಂಡರಾದ ಕಲ್ಲಹಳ್ಳಿ ದೇವರಾಜು, ಕೆಂಪಣ್ಣ, ನರಸಿಂಹಮೂರ್ತಿ, ಶ್ರೀನಿವಾಸ್ ಮತ್ತಿತರರು ಇದ್ದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಶಾಸಕ ಡಿ.ಸಿ. ಗೌರಿಶಂಕರ್ ಅವರು ಸಾಂಕೇತಿಕವಾಗಿ ಚುನಾವಣಾಧಿಕಾರಿ ಹೋಟೆಲ್ ಶಿವಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
ಮುಖಂಡರಾದ ಬೆಳಗುಂಬ ವೆಂಕಟೇಶ್, ಪಾಲಿಕೆ ಸದಸ್ಯ ಶ್ರೀನಿವಾಸ್, ನರುಗನಹಳ್ಳಿ ವಿಜಯಕುಮಾರ್, ತನ್ವೀರ್ ರೆಹಮಾನ್ ಮತ್ತಿತರರು ಇದ್ದರು.