Friday, October 18, 2024
Google search engine
Homeಜಿಲ್ಲೆತುಮಕೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳ ಸಾವು

ತುಮಕೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳ ಸಾವು

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.

ಮೃತ ಮಕ್ಕಳು 8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರಜ್ವಲ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.

ಸಿದ್ದರಾಮೇಶ್ವರ ಬಡಾವಣೆಯಲ್ಲಿ ವಾಸವಿದ್ದ ವೀರಭದ್ರಯ್ಯ ಎಂಬುವರ ಪುತ್ರ ಯತೀಶ್ ಮತ್ತು ಸಿದ್ದಲಿಂಗಯ್ಯ ಅವರ ಪುತ್ರ ಪ್ರಜ್ವಲ್ ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular