ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಇಂದು ಕನಕಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಏಪ್ರಿಲ್ 17ರಂದು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಈಗ ಅವರ ಸಹೋದರ ಡಿ.ಕೆ.ಸುರೇಶ್ ಕೂಡ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಡಿ.ಕೆ.ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ತಮ್ಮ ಸೋದರ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾಋ ಕುತಂತ್ರ ನಡೆಸಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾನು ಸಹ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.