Friday, November 22, 2024
Google search engine
Homeಮುಖಪುಟಬಿಜೆಪಿಗೆ ನಮ್ಮ ಬೆಂಬಲ - ಲೋಕ ಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷೆ ಶಿಲ್ಪ ಬಾಬು ಹೇಳಿಕೆ

ಬಿಜೆಪಿಗೆ ನಮ್ಮ ಬೆಂಬಲ – ಲೋಕ ಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷೆ ಶಿಲ್ಪ ಬಾಬು ಹೇಳಿಕೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ ಎಲ್ಲಾ 224 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷೆ ಶಿಲ್ಪ ಬಾಬು ಹೇಳಿದ್ದಾರೆ.

ರಾಷ್ಟ್ರೀಯ ಲೋಕಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷರಾದ ಶಿಲ್ಪ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್.ಎಲ್.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಸ್ ಅವರ ಸೂಚನೆಯಂತೆ ಈ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುತ್ತಿಲ್ಲ. ಆದರೆ ಎಲ್ಲಾ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಬಿಜೆಪಿ ಪರ ಈಗಾಗಲೇ ಪ್ರಚಾರದಲ್ಲಿ ನಿರತರಾಗಿರುವುದಾಗಿ ಹೇಳಿದರು.

ರಾಜ್ಯ ಬಿಜೆಪಿ ನಾಯಕರ ಸಹಯೋಗ ಮತ್ತು ಸಮನ್ವಯತೆಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಮತಯಾಚಿಸುತ್ತಿದ್ದೇವೆ. ಬಿಜೆಪಿ ರಾಷ್ಟ್ರೀಯ ವಿಚಾರಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು, ಎನ್.ಡಿ.ಎ ಮೈತ್ರಿಕೂಟದ ಎರಡನೇ ಅತಿ ದೊಡ್ಡ ಪಕ್ಷವಾಗಿದೆ. ಬಿಜೆಪಿ ರಾಷ್ಟ್ರೀಯ ವಿಷಯಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು, ದೇಶದ ಹಿತ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರನ್ನು ಮನವೊಲಿಸುತ್ತಿದ್ದೇವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular