Friday, January 30, 2026
Google search engine
Homeಜಿಲ್ಲೆಗಬ್ಬೆದ್ದ ಸ್ಮಾರ್ಟ್ ಸಿಟಿ - ಅಪ್ಪ, ಮಗನ ವಿರುದ್ಧ ಸೊಗಡು ಶಿವಣ್ಣ ಆಕ್ರೋಶ

ಗಬ್ಬೆದ್ದ ಸ್ಮಾರ್ಟ್ ಸಿಟಿ – ಅಪ್ಪ, ಮಗನ ವಿರುದ್ಧ ಸೊಗಡು ಶಿವಣ್ಣ ಆಕ್ರೋಶ

ತುಮಕೂರು ಸ್ಮಾರ್ಟ್ ಸಿಟಿ ಗಬ್ಬೆದ್ದು ನಾರುತ್ತಿದೆ. ಮಳೆ ನೀರು ಸರಾಗವಾಗಿ ಹರಿಯದೆ ಎಲ್ಲೆಂದರಲ್ಲಿ ನಿಂತು ಜನರು ಓಡಾಡಲು ತೊಂದರೆ ಯಾಗಿದೆ. ಇದಕ್ಕೆ ಅಪ್ಪ-ಮಗನೇ ಕಾರಣ ಎಂದು ಮಾಜಿ ಸಚಿವ ಹಾಗೂ ತುಮಕೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿ ನಡೆದಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ಮಾಡಲಾಗಿದ್ದು, ಸಾಕಷ್ಟು ಅವ್ಯವಹಾರ ನಡೆದಿದೆ. ಈ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಸ್ಮಾರ್ಟ್ ಸಿಟಿಯಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಿಂಗ್ ರಸ್ತೆ ಕಳಪೆ ಗುಣಮಟ್ಟದಿಂದ ಕೂಡಿದ್ದು ಯಾರೂ ಕೇಳುವವರಿಲ್ಲದೆ ಆಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ತುಮಕೂರು ನಗರದ ಎಲ್ಲಾ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ನೀರು ನಿಂತು ಗಬ್ಬು ನಾರುತ್ತಿದೆ ಎಂದು ಆರೋಪಿಸಿದರು.

ನಾನು ಸಿದ್ದಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರಸ್ವಾಮಿಗಳ ಆಶಯಗಳಂತೆ ನಡೆದುಕೊಂಡು ಬಂದಿದ್ದೇನೆ. ಭ್ರಷ್ಟಾಚಾರರಹಿತ, ಸ್ವಜನ ಪಕ್ಷಪಾತ ಮಾಡದೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.

ಚುನಾವಣಾ ಪ್ರಚಾರದ ಸಮಯದಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರು ನನ್ನನ್ನು ಅಧಿಕ ಸಂಖ್ಯೆಯ ಮತಗಳಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular