ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಏಕಾಂಗಿಯಾಗಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ರಾವ್‌ಸಾಹೇಬ್‌ಪಾಟೀಲ್ ದಾನ್ವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2019ರಲ್ಲಿ ಎರಡನೇ ಬಾರಿಗೆ ನರೇಂದ್ರಮೋದಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆಗೆದುಕೊಂಡು ಪ್ರಧಾನಮಂತ್ರಿ ಅವಾಸ್ ಯೋಜನೆ, ಉಜ್ವಲ ಯೋಜನೆ, ಕಿಸಾನ್ ಸನ್ಮಾನ್ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಪಕ್ಷಕ್ಕೆ ಬೆಂಬಲವಾಗಿವೆ ಎಂದರು.
ತುಮಕೂರು ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳ ಜೊತೆಗೆ, ನೆಲಮಂಗಲ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ತುಮಕೂರು ನಗರದ ಜೋತಿ ಗಣೇಶ್, ಗ್ರಾಮಾಂತರದ ಬಿ.ಸುರೇಶಗೌಡ ಅವರುಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ವಿರೋಧಪಕ್ಷ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದೆ. ರಾಮಭಕ್ತರು, ಹನುಮಭಕ್ತರನ್ನು ಇದನ್ನು ಒಪ್ಪಲು ಸಾಧ್ಯವಿಲ್ಲ. ಇದು ಒಂದು ವರ್ಗವನ್ನು ತೃಷ್ಟೀಕರಣ ಮಾಡುವ ಕಾಂಗ್ರೆಸ್ ಗುಣ ಬಹಿರಂಗ ಮಾಡಿದೆ. ಹಿಂದೂ ದೇವತೆಗಳನ್ನು ಅವಮಾನಿಸುವುದೇ ಇವರ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.


