ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ತಮ್ಮ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.
ಸಮಿತಿಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಇದು ಅವರ ರಾಜಿನಾಮೆ ನಿರ್ಧಾರವನ್ನು ಸರ್ವಾನುಮತದಿಂದ ತಿರಸ್ಕರಿಸುತ್ತದೆ ಮತ್ತು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸುತ್ತದೆ ಎಂದು ಸಮಿತಿಯ ಸಭೆಯ ನಂತರ ಪಟೇಲ್ ತಿಳಿಸಿದರು.
ಮೇ 2ರಂದು ಎನ್.ಸಿ.ಪಿಯ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ನಂತರ ಪವಾರ್ ಸ್ವತಃ ಅಜಿತ್ ಪವಾರ್, ಸುಪ್ರಿಯಾ ಸುಳೆ, ಮಾಜಿ ಕೇಂದ್ರ ಸಚಿವ ಪ್ರಪೂಲ್ ಪಟೇಲ್ ಮತ್ತು ಛಗನ್ ಭುಜಬಲ್ ಸೇರಿದಂತೆ ಸಮಿತಿಯನ್ನು ರಚಿಸಿದ್ದರು.
ನಾವು ಈ ನಿರ್ಣಯದೊಂದಿಗೆ ಪವಾರ್ ಸಾಹೇಬ್ ಅವರನ್ನು ಭೇಟಿ ಮಾಡುತ್ತೇವೆ ಮತ್ತು ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಢುತ್ತೇವೆ ಎಂದು ಸಮಿತಿಯ ಉಪಾಧ್ಯಕ್ಷ ಮತ್ತು ಸಂಚಾಲಕರೂ ಆಗಿರುವ ಪಟೇಲ್ ಹೇಳಿದರು. ಪಕ್ಷ ಮತ್ತು ದೇಶಕ್ಕೆ ಪವಾರ್ ಅವರಂತಹ ನಾಯಕನ ಅಗತ್ಯವಿದೆ ಎಂದು ಪಟೇಲ್ ಹೇಳಿದ್ದಾರೆ.
ಪವಾರ್ ಸಾಹೇಬ್ ಅವರು ದೇಶದ ಗೌರವಾನ್ವಿತ ನಾಯಕರಾಗಿದ್ದಾರೆ. ಪವಾಋ್ ಅವರ ನಿರ್ಧಾರದ ವಿರುದ್ಧ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾವನೆಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಪಟೇಲ್ ತಿಳಿಸಿದರು.