ಮೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡುತ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ ಕಾಳಜಿ ಇದ್ದರೆ ರೋಡ್ ಶೋ ಮುಂದಕ್ಕೆ ಹಾಕುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.ಬೆ