Thursday, September 19, 2024
Google search engine
Homeಜಿಲ್ಲೆಸಾಲ-ಸೌಲಭ್ಯ ವಿಳಂಬ ಮಾಡಿದರೆ ಕ್ರಮ

ಸಾಲ-ಸೌಲಭ್ಯ ವಿಳಂಬ ಮಾಡಿದರೆ ಕ್ರಮ

ಸರ್ಕಾರಿ ವಲಯದ ನಿಗಮ ಮಂಡಳಿ ಯೋಜನೆಯಡಿ ಫಲಾನುಭವಿಗಳಿಗೆ ಸಾಲ-ಸೌಲಭ್ಯವನ್ನು ನೀಡಲು ವಿಳಂಬ ಮಾಡಿದರೆ ಅಂತಹ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರ ಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬ್ಯಾಂಕ್‌ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್ ವ್ಯವಸ್ಥಾಪಕರು ವಿಳಂಬ ಮಾಡುತ್ತಿರುವುದರಿಂದ ಪರಿಶಿಷ್ಠ ಜಾತಿ/ಪಂಗಡದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಸೌಲಭ್ಯ ಒದಗಿಸದ ವ್ಯವಸ್ಥಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ನಿಗಮಗಳಿಂದ ಸೌಲಭ್ಯ ಪಡೆಯಲು ಆಯ್ಕೆಯಾದ ಫಲಾನುಭವಿಗಳಿಗೆ ಯೋಜನೆಯ ಫಲ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಬ್ಯಾಂಕ್‌ಗಳು ಫಲಾನುಭವಿಗಳನ್ನು ಅಲೆದಾಡಿಸದೇ ಸಾಲ-ಸೌಲಭ್ಯ ಒದಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 49 ರಾಷ್ಟ್ರೀಕೃ ಬ್ಯಾಂಕ್‌ಗಳ ಪೈಕಿ ವಾರ್ಷಿಕ ಗುರಿ ನಿಗಧಿಯಾಗದಿರುವ ಬ್ಯಾಂಕ್‌ಗಳನ್ನು ಸಾಲ ಒದಗಿಸುವ ಬ್ಯಾಂಕ್‌ಗಳ ಪಟ್ಟಿಯಿಂದ ಕೈ ಬಿಡಬೇಕು. ವಿವಿಧ ಇಲಾಖೆಗಳಡಿ ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸಬೇಕು. ಫಲಾನುಭವಿಗಳಿಗೆ ನಿಯಮಾನುಸಾರ ಸಾಲ ನೀಡಬೇಕು ಎಂದು ಜಿಲ್ಲಾ ಲೀಡ್ ಮ್ಯಾನೇಜರ್ ಅವರಿಗೆ ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular