Monday, December 23, 2024
Google search engine
Homeಮುಖಪುಟಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರೆಂಟಿ ಯೋಜನೆಗಳ ಜಾರಿ - ಡಾ.ಜಿ.ಪರಮೇಶ್ವರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರೆಂಟಿ ಯೋಜನೆಗಳ ಜಾರಿ – ಡಾ.ಜಿ.ಪರಮೇಶ್ವರ್

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಡಜನರಿಗೆ 10 ಕೆ.ಜಿ. ಪಡಿತರ ಅಹಾರಧಾನ್ಯ ವಿತರಣೆ, ಗ್ಯಾಸ್ ಬೆಲೆ ಇಳಿಕೆ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿದೆ. ಹೀಗಾಗಿ ನನ್ನನ್ನು ಬೆಂಬಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು.

ಕೊರಟಗೆರೆ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಡಾ.ಜಿ.ಪರಮೇಶ್ವರ್ ಮಾತನಾಡಿ, ಕೊರಟಗೆರೆ ಕ್ಷೇತ್ರದ ಜನಾಶೀರ್ವಾದದಿಂದ 2008ರಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಸತತ 8 ವರ್ಷಗಳ ಕಾಲ ಸುಧೀರ್ಘ ಅವಧಿಗೆ ಅಧ್ಯಕ್ಷನಾಗಿ, ನನ್ನ ನೇತೃತ್ವದಲ್ಲಿ ಪಕ್ಷವು 2013ರಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಂತಾಯಿತು ಎಂದರು.

2018ರಲ್ಲಿ ನಾನು ಪುನರಾಯ್ಕೆಯಾಗುವ ಮೂಲಕ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ತಮ್ಮ ಸೇವೆಯನ್ನು ಸಲ್ಲಿಸುವ ಸುವರ್ಣಾ ವಕಾಶವು ಕೂಡ ಒದಗಿ ಬಂದಿತು. ಇದೆಲ್ಲದರ ಹಿಂದಿರುವ ಶಕ್ತಿ ಕೊರಟಗೆರೆಯ ಮಹಾಜನತೆ ಎಂಬುದು ಇತಿಹಾಸದ ಪುಟಗಳನ್ನು ಸೇರಿಕೊಂಡಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವು ಇದನ್ನು ಸವಾಲಾಗಿ ಸ್ವೀಕರಿಸುವ ಮೂಲಕ ರಾಜ್ಯದ ಜನಸಾಮಾನ್ಯರು ಹಾಗೂ ಬಡವರ ಪರವಾಗಿ ನಿಲ್ಲುವಂತಹ ಕೆಲಸವನ್ನು ಮಾಡಿದೆ ಎಂದರು.

ಸಾಮಾನ್ಯರು ಅನುಭವಿಸುತ್ತಿರುವ ನೋವು ಮತ್ತು ಸಂಕಷ್ಟಗಳಿಗೆ ಪರಿಹಾರ ನೀಡಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ ಮಾಸಿಕ 2000ರೂ.ಗಳು, ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್, 10 ಕೆ.ಜಿ. ಉಚಿತ ಅಕ್ಕಿ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ.3000ಗಳು ಮತ್ತು ಡಿಪ್ಲೊಮಾ ಓದಿದವರಿಗೆ ಮಾಸಿಕ ರೂ. 1500ಗಳನ್ನು ಎರಡು ವರ್ಷಗಳವರೆಗೆ ನೀಡುವ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಪರಮೇಶ್ವರ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular