Thursday, November 21, 2024
Google search engine
Homeಮುಖಪುಟಮೇ 20, 21ರಂದು ಸಿಇಟಿ ಪರೀಕ್ಷೆ

ಮೇ 20, 21ರಂದು ಸಿಇಟಿ ಪರೀಕ್ಷೆ

ತುಮಕೂರು ಜಿಲ್ಲೆಯಲ್ಲಿ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ಬಿ.ಎಸ್‌ಸಿ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಮೇ 20 ಮತ್ತು 21ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪಬಾರದಂತೆ ಪರೀಕ್ಷೆಯನ್ನು ಉತ್ತಮ ಹಾಗೂ ಸಮರ್ಥವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದ್ದಾರೆ.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಸಿಇಟಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಬೇಕು. ಸಿಇಟಿ ಪರೀಕ್ಷೆ ಬರೆಯುವ ಮಕ್ಕಳ ಪೋಷಕರು/ಹತ್ತಿರದ ಸಂಬಂಧಿಕರನ್ನು ವೀಕ್ಷಕರನ್ನಾಗಿ ನೇಮಕ ಮಾಡಬಾರದು ಹಾಗೂ ವಿಜ್ಞಾನ ವಿಷಯದ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ಪರಿವೀಕ್ಷಕರನ್ನಾಗಿ ನೇಮಿಸಬಾರದೆಂದು ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಸಿಇಟಿ ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಗೌಪ್ಯ ಬಂಡಲುಗಳನ್ನು ಖಜಾನೆಯಲ್ಲಿ ಸಂರಕ್ಷಿಸಿಡಬೇಕು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತ ಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಒದಗಿಸಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಯಾರೂ ಸಹ ವಾಚ್, ಆಭರಣ, ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಎಲ್ಲಾ ಕೇಂದ್ರಗಳಿಗೆ ಸಿಸಿ ಟಿವಿಯನ್ನು ಅಳವಡಿಸಲಾಗಿದ್ದು, ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆಯನ್ನು ಪಾಲಿಸಬೇಕೆಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular