ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ಐದು ದಿನಗಳಿಂದ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಂತೆ ಆಗಿದೆ.
ಉಪಮುಖ್ಯಮಂತ್ರಿಯನ್ನಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರಿಡಾಂಗಣದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ಅದಕ್ಕಾಗಿ ಸಿದ್ದತೆಗಳು ನಡೆಯುತ್ತಿವೆ.