Tuesday, December 3, 2024
Google search engine
Homeರಾಷ್ಟ್ರೀಯಪೊಲೀಸ್ ಠಾಣೆಗಳಲ್ಲಿ ಹೆಚ್ಚು ಮಾನವಹಕ್ಕು ಉಲ್ಲಂಘನೆ - ಮುಖ್ಯನ್ಯಾಯಮೂರ್ತಿ ರಮಣ ಕಳವಳ

ಪೊಲೀಸ್ ಠಾಣೆಗಳಲ್ಲಿ ಹೆಚ್ಚು ಮಾನವಹಕ್ಕು ಉಲ್ಲಂಘನೆ – ಮುಖ್ಯನ್ಯಾಯಮೂರ್ತಿ ರಮಣ ಕಳವಳ

ದೇಶದಲ್ಲಿರುವ ಪೊಲೀಸ್‌ ಠಾಣೆಗಳಲ್ಲೇ ಹೆಚ್ಚು ಪ್ರಮಾಣದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್.ವಿ. ರಮಣ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ದೆಹಲಿಯ ವಿಜ್ಞಾನ ಭವನದಲ್ಲಿ ಆಗಸ್ಟ್ 8ರಂದು ಭಾರತೀಯ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಏರ್ಪಡಿಸಿದ್ದ ಸಮಾರಂಭವೊಂದಲ್ಲಿ ಮಾತನಾಡಿ “ಕಸ್ಟಡಿಯಲ್ಲಿನ ಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಸಮಸ್ಯೆಗಳು” ಎಂದು ಆತಂತ ವ್ಯಕ್ತಪಡಿಸಿದ್ದಾರೆ.

‘ಸಾಂವಿಧಾನಿಕ ಘೋಷಣೆಗಳು ಮತ್ತು ಖಾತ್ರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಇದರಿಂದ ಬಂಧಿತ ವ್ಯಕ್ತಿಗಳಿಗೆ ದೊಡ್ಡ ನಷ್ಟವಾಗಿದೆ. ಶೀಘ್ರವೇ ತೆಗೆದುಕೊಳ್ಳುವ ತೀರ್ಮಾನಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ’ ಎಂದಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. ‘ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ನಾವು ಕಾನೂನು ನಿಯಮದಿಂದ ಆಳ್ವಿಕೆಯ ಸಮಾಜವಾಗಿ ಉಳಿಯಬಯಸಿದರೆ, ಅಧಿಕ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರ ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ರಮಣ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular