ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲುಗಳ ಅಪಘಾತದಲ್ಲಿ ಕನಿಷ್ಠ 233 ಮಂದಿ ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಕ್ಕಿಯಾಗಿ ಮತ್ತೊಂದು ಬೋಗಿಯ ಮೇಲೆ ಬಿದ್ದ ಬೋಗಿಯಲ್ಲಿ ತೀವ್ರವಾಗಿ ಕೊಚ್ಚಿ ಹೋಗಿರುವ ಬೋಗಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮುಖ್ಯಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ ಹೇಳಿದ್ದಾರೆ.
ದುರಂತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರೈಲು ಅಪಘಾತದಲ್ಲಿ ಮೃತಪಟ್ಟಿರುವ ಪ್ರಯಾಣಿಕರ ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ನ 10 ರಿಂದ 12 ಬೋಗಿಗಳು ಹಳಿತಪ್ಪಿ ಎದುರಿನ ಟ್ರಾಕ್ ಗೆ ಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಕೋರಮಂಡಲ್ ಎಕ್ಸ್ ಪ್ರೆಸ್ ಬೋಗಿಗಳು ಡಿಕ್ಕಿ ಹೊಡೆದು ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದು ಇಂದು ಯಾವುದೇ ರಾಜ್ಯ ಆಚರಣೆಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ.


