Thursday, January 29, 2026
Google search engine
Homeಮುಖಪುಟಅರಣ್ಯ ಸಂರಕ್ಷಣೆ ಜೊತೆಗೆ ರೈತರ ಹಿತವೂ ಮುಖ್ಯ - ಎಚ್.ಡಿ.ಕೆ

ಅರಣ್ಯ ಸಂರಕ್ಷಣೆ ಜೊತೆಗೆ ರೈತರ ಹಿತವೂ ಮುಖ್ಯ – ಎಚ್.ಡಿ.ಕೆ

ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಾಂಡ್ರೆ ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವರು ಈಗಾಗಲೇ ಘೋಷಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು ಹಾಗೂ ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular