ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಡಿ.ಕೆ ಸುರೇಶ್ ಅವರು ಇಂದು ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸಚಿವರು ಹಾಗೂ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಸಹ ಪಾಲಕರಿಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಸೇರಿದಂತೆ ಇತರರು ಹಾಜರಿದ್ದರು


