ಹಾಡುಹಗಲೇ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಬಿಹಾರ ಮೂಲದ ಯುವಕ ಲಖನ್ ಮಾನ್ಸಿ ಎಂದು ಗುರುತಿಸಲಾಗಿದೆ.
ತುಮಕೂರಿನ ಅಂತರಸನಹಳ್ಳಿ ಸಮೀಪದ ಮಾರುಕಟ್ಟೆಯಲ್ಲಿ ಶೌಚಾಲಯ ಶುಚಿಗೊಳಿಸುವ ಕೆಲಸ ಮಾಡುತ್ತಿದ್ದ ಯುವಕನನ್ನು ಶೌಚಾಲಯದಲ್ಲಿ ಬರ್ಬರವಾಗಿ ಕತ್ತು ಕೊಯ್ದು ಹತ್ಯೆ ಮಾಡಿದ್ದು ಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಹತ್ಯೆಯಾದ ಯುವಕ ಬಿಹಾರದ ಮೂಲದವನಾಗಿದ್ದು ಕಳೆದ ಆರು ತಿಂಗಳಿಂದ ಮಾರುಕಟ್ಟೆಯಲ್ಲಿ ಶೌಚಾಲಯವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ನಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


