Friday, January 30, 2026
Google search engine
Homeಮುಖಪುಟಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ - ಸಿಎಂ ಸಿದ್ದರಾಮಯ್ಯ

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ – ಸಿಎಂ ಸಿದ್ದರಾಮಯ್ಯ

200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವವರು ಬಿಲ್ ಕಟ್ಟುವ ಅಗತ್ಯವಿಲ್ಲ. ರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವ ಬಾಡಿಗೆದಾರರಿಗೂ ಅನ್ವಯವಾಗಲಿದ್ದು, ಬಾಡಿಗೆದಾರರು ಕೂಡ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಉಚಿತ ವಿದ್ಯುತ್ ಯೋಜನೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

ಬಾಡಿಗೆದಾರರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. 200 ಯೂನಿಟ್ ಒಳಗೆ ಬಳಕೆ ಮಾಡುವವರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ದೇವರಾಜ ಅರಸು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ ಎಂದರು.

ದೇವರಾಜ ಅರಸು ಮುಖ್ಯಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು ಎಂದು ತಿಳಿಸಿದರು.

ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದು ಸ್ಮರಿಸಿದರು.

ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ದೇವರಾಜ ಅರಸು ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular