ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನವೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು. ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದರು.
ಮೊದಲು ಕೊರಟಗೆರೆ ಮಹಾಲಿಂಗಪ್ಪ ಅವರನ್ನಿತೆಗೆದುಹಾಕಿ.
ಆ ತಾಕ್ಕತ್ ಇದೇಯ ಕುಮಾರಸ್ವಾಮಿಯವರೆ