Thursday, January 29, 2026
Google search engine
Homeಮುಖಪುಟಡಾ.ರಾಜ್ ಮೇರು ಸಂಸ್ಕಾರದ ರಾಯಭಾರಿ - ಸಿಎಂ ಸಿದ್ದರಾಮಯ್ಯ

ಡಾ.ರಾಜ್ ಮೇರು ಸಂಸ್ಕಾರದ ರಾಯಭಾರಿ – ಸಿಎಂ ಸಿದ್ದರಾಮಯ್ಯ

ಡಾ.ರಾಜ್ ಕುಮಾರ್ ಅಕಾಡೆಮಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ರಾಜ್‌ಕುಮಾರ್ ಅವರನ್ನು ಭೇಟಿ ಮಾಡಲು ಹೋದಾಗಲೆಲ್ಲ, “ಬನ್ನಿ, ಬನ್ನಿ ನಮ್ ಕಾಡಿನವರು” ಎಂದು ಖುಷಿಯಿಂದ ಕರೆಯುತ್ತಿದ್ದರು ಎಂದು ಸ್ಮರಿಸಿದ್ದಾರೆ.

ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ . ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ಮೇರು ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದು ಹೇಳಿದ್ದಾರೆ.

ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್ ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ದೇಶಸೇವೆಯ ಕನಸು ಕಾಣುತ್ತಿರುವ ಅಸಂಖ್ಯ ಮನಸುಗಳಿಗೆ ಆಸರೆಯಾಗಲಿ ಎಂದು ಹಾರೈಸಿದರು.

ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಬಹಳಷ್ಟು ಜನರಿದ್ದಾರೆ. ಅವರಿಗೆ ಶಿಕ್ಷಣದ ಜೊತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular