Thursday, January 29, 2026
Google search engine
Homeಮುಖಪುಟಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದರು.

ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಪ್ರಶ್ನಿಸಿದರು.

ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ ಎಲ್ಒಸಿ ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular