Thursday, January 29, 2026
Google search engine
Homeಮುಖಪುಟಸಮರ್ಪಕ ಕಾರ್ಯ ನಿರ್ವಹಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ

ಸಮರ್ಪಕ ಕಾರ್ಯ ನಿರ್ವಹಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸೂಚಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು.

ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಸಿದ್ದರಾಮಯ್ಯ ಇಲಾಖೆ ಆಯುಕ್ತರಿಗೆ ಸೂಚಿಸಿದರು.

ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿ, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು ಎಂದು ಪ್ರಶ್ನಿಸಿದರು.

ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರೆದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular