ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.
ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡು ಯಾರ ಓಲೈಕೆ ಮಾಡುತ್ತಿದೆ. ಹೈಕಮಾಂಡ್ ಹಂಗಿನಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ರಾಜ್ಯದ ಜನರ ಹಿತಾಸಕ್ತಿಗಿಂತ ಹೈಕಮಾಂಡ್ ಓಲೈಕೆಗೆ ಆದ್ಯತೆ ನೀಡುತ್ತಿರುವಂತಿದೆ ಎಂದಿದ್ದಾರೆ.
ಪಠ್ಯ ಪುಸ್ತಕವನ್ನೂ ಪರಿಷ್ಕರಣೆಯ ಹೆಸರಲ್ಲಿ ರಾಷ್ಟ್ರ ಭಕ್ತ ಸಂಘಟನೆ ಸ್ಥಾಪಿಸಿ, ಎಲ್ಲರಲ್ಲೂ ದೇಶಭಕ್ತಿ ಬೆಳೆಯಲು ಕಾರಣವಾಗುವಂತಹ ಆರ್ ಎಸ್ ಎಸ್ ಸಂಘಟನೆ ಸ್ಥಾಪಿಸಿರುವ ಡಾ. ಕೇಶವ ಬಲರಾಮ್ ಹೆಡಗೇವಾರ ಹಾಗೂ ವೀರ ಸಾವರ್ಕರ್ ಕುರಿತ ಪಠ್ಯವನ್ನು ತೆಗೆದು ಹಾಕಲು ತೀರ್ಮಾನ ತೆಗೆದುಕೊಂಡಿರುವುದು ದೇಶದ್ರೋಹಕ್ಕೆ ಸಮಾನ ಎಂದು ವ್ಯಾಖ್ಯಾನಿಸಿದ್ದಾರೆ.