Thursday, November 21, 2024
Google search engine
Homeಮುಖಪುಟಶಾಸಕ ಮುನಿರತ್ನರನ್ನು ಬಂಧಿಸಿ ವಿಚಾರಣೆ ಮಾಡಲಿ - ಎಎಪಿ ಕಾರ್ಯಾಧ್ಯಕ್ಷ ಮೋಹನ್ ದಾಸರಿ

ಶಾಸಕ ಮುನಿರತ್ನರನ್ನು ಬಂಧಿಸಿ ವಿಚಾರಣೆ ಮಾಡಲಿ – ಎಎಪಿ ಕಾರ್ಯಾಧ್ಯಕ್ಷ ಮೋಹನ್ ದಾಸರಿ

ರಾಜರಾಜೇಶ್ವರಿ ನಗರದ 118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ ಶಾಸಕ ಮುನಿರತ್ನ ರವರ ಪಾತ್ರದ ಬಗ್ಗೆ ತನಿಖೆ ನಡೆಸಲು ಕೂಡಲೇ ಶಾಸಕರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2008 ರಿಂದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಕೋಟ್ಯಂತರ ರೂಪಾಯಿಗಳ ಬಾನಗಡಿಯ ಹಿಂದೆ ನೇರ ಪಾತ್ರವಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕರ ನೇರ ಹಸ್ತಕ್ಷೇಪವಿಲ್ಲದೆ ಕೇವಲ ಅಧಿಕಾರಿಗಳು ಮಾತ್ರ ಇಷ್ಟೆಲ್ಲ ಹಗರಣಗಳು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಲೋಕಾಯುಕ್ತ ವರದಿಯಲ್ಲಿ ಶಾಸಕ ಮುನಿರತ್ನ ಹೆಸರು ಕೈ ಬಿಟ್ಟಿರುವುದರ ಹಿಂದೆ ಸಹ ಈ ಹಿಂದಿನ ಬಿಜೆಪಿ ಸರ್ಕಾರದ ನೇರ ಷಡ್ಯಂತರವಿತ್ತು. ಈ ಹಗರಣದ ಹಿಂದೆ ಮುನಿರತ್ನ ಕೈವಾಡವಿದೆಯೆಂದು ಇವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಈ ಹಿಂದೆ ಆಮ್ ಆದ್ಮಿ ಪಕ್ಷವು ಒತ್ತಾಯಿಸಿತ್ತು ಎಂದರು.

ನೂತನ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡು ಪ್ರಕರಣವನ್ನು ತಿಪ್ಪೆ ಸಾರಿಸುವ ಕೆಲಸ ಮಾಡಬಾರದು. ಶಾಸಕ ಮುನಿರತ್ನ ಅವರನ್ನು ಬಿಜೆಪಿಯವರಂತೆ ರಕ್ಷಿಸುವುದನ್ನು ಬಿಟ್ಟು ಕೂಡಲೆ ಬಂಧಿಸಿ ವಿಚಾರಣೆ ಗುಣಪಡಿಸಬೇಕೆಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular