ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದೆ.
ಕ್ಯಾಬಿನೆಟ್ ದರ್ಜೆಯ ಸಚಿವರಿಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ವಿ.ಸುನಂದಮ್ಮ ಅವರು ಆದೇಶ ಹೊರಡಿಸಿದ್ದಾರೆ.