Friday, November 22, 2024
Google search engine
Homeಜಿಲ್ಲೆಬಾಬು ಜಗಜೀವನರಾಂ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿ

ಬಾಬು ಜಗಜೀವನರಾಂ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿ

ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಡಾ ಬಾಬು ಜಗಜೀವನರಾಂ ಅವರ ಆದರ್ಶ ಹಾಗೂ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಅರಿತು ಇಂದಿನ ಯುವ ಪೀಳಿಗೆ ಮುನ್ನಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಡಾ ಬಾಬು ಜಗಜೀವನರಾಂ ಅವರ 37ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಭಾರತದಲ್ಲಿ ಹಸಿವು ಒಂದು ಪಿಡುಗಾಗಿ ಸಂಭವಿಸಿತ್ತು. ಆ ಸಮಯದಲ್ಲಿ ಬಾಬು ಜಗಜೀವನರಾಂ ಅವರು ಕೃಷಿ ಕ್ಷೇತ್ರದಲ್ಲಿ ಹಸಿರು ಕ್ರಾಂತಿಯನ್ನು ದೇಶದ ಉದ್ದಗಲಕ್ಕೂ ಹಬ್ಬಿಸುವ ಮೂಲಕ ಆಹಾರ ಉತ್ಪಾದನೆಯನ್ನು ಹೆಚ್ಚು ಮಾಡಿದ್ದರು ಎಂದು ತಿಳಿಸಿದರು.

ಡಾ ಬಾಬು ಜಗಜೀವನರಾಂ ತಮ್ಮ ಶಾಲಾ ದಿನಗಳಲ್ಲಿ ಅಸ್ಪೃಶ್ಯತೆಯನ್ನು ಮೆಟ್ಟಿ ನಿಂತು ಉನ್ನತ ಪದವಿ ಶಿಕ್ಷಣವನ್ನು ಪಡೆದು ಭಾರತ ಸರ್ಕಾರದಲ್ಲಿ ರಕ್ಷಣಾ, ಕೃಷಿ, ಕಾರ್ಮಿಕ ಸಚಿವರಾಗಿ ಹಾಗೂ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿರುತ್ತಾರೆ ಎಂದು ಹೇಳಿದರು.

ರಕ್ಷಣ ಸಚಿವರಾಗಿದ್ದ ಸಮಯದಲ್ಲಿ ದೇಶದ ಭದ್ರತೆಗಾಗಿ ಹಲವಾರು ಭದ್ರತಾ ನಿಯಮಗಳನ್ನು ರೂಪಿಸಿದ್ದು, ಅದರಂತೆ ಇಂದಿಗೂ ಸದರಿ ನಿಯಮಗಳು ಪಾಲನೆಯಾಗುತ್ತಿವೆ. ಇಂತಹ ಮಹನೀಯರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕೆಂದು ಕರೆ ನೀಡಿದರು.

ಸಮುದಾಯದ ಮುಖಂಡ ವೈ.ಎಸ್.ಹುಚ್ಚಯ್ಯ ಮಾತನಾಡಿ, ಡಾ ಬಾಬು ಜಗಜೀವನರಾಂ ಅವರು ರಕ್ಷಣಾ ಖಾತೆ ಸಚಿವರಾಗಿದ್ದ ಸಮಯದಲ್ಲಿ ಭಾರತದ ರಕ್ಷಣಾ ಇಲಾಖೆಯು ಎಷ್ಟು ಬಲಿಷ್ಟವಾಗಿದೆ ಎಂದು ವಿಶ್ವಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಬಾಂಗ್ಲಾ ದೇಶದ ವಿಭಜನೆಯಲ್ಲಿ ಭಾರತಕ್ಕೆ ಗೌರವವನ್ನು ತಂದು ಕೊಟ್ಟಿದ್ದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಎಚ್. ಶಿವಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಬಿ.ಎಂ., ಆದಿ ಜಾಂಭವ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಜಯರಾಂ, ಡಾ ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular