Thursday, November 21, 2024
Google search engine
Homeಮುಖಪುಟ1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 2ದಿನ ಮೊಟ್ಟೆ, ಕಡಲೆಕಾಯಿ ಚಿಕ್ಕಿ - ಸಿಎಂ...

1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 2ದಿನ ಮೊಟ್ಟೆ, ಕಡಲೆಕಾಯಿ ಚಿಕ್ಕಿ – ಸಿಎಂ ಸಿದ್ದರಾಮಯ್ಯ

ಇನ್ನು ಮುಂದೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ 2ದಿನ ಮೊಟ್ಟೆ, ಕಡಲೆಕಾಯಿ ಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾಭ್ಯಾಶ ಮಾಡುತ್ತಿರುವ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ, ಕಡಲೆಕಾಯಿ ಚಿಕ್ಕಿ ಹಾಗೂ ಬಾಳೆಹಣ್ಣನ್ನು ವಿತರಿಸಲಾಗುತ್ತಿತ್ತು. ಈಗ ಈ ಯೋಜನೆಯನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಈ ಯೋಜನೆಯಿಂದ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಉಂಟಾಗುತ್ತದೆ. ಜೊತೆಗೆ ಈ ಯೋಜನೆಯನ್ನು 9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ 60 ಲಕ್ಷ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಇದಕ್ಕಾಗಿ 280 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳಲ್ಲಿ ಉಂಟಾಗುವ ಕಲಿಕಾ ನ್ಯೂನತೆಯನ್ನು ನಿವಾರಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂಪಾಯಿ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮರುಸಿಂಚನ ಎಂಬ ಯೋಜನೆಯಡಿ 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ಕೊಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular