Thursday, January 29, 2026
Google search engine
Homeಮುಖಪುಟಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಟುಂಬದ ಒಡತಿಗೆ ಪ್ರತಿ ತಿಂಗಳು 2,000 ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಮತ್ತು ಬಿಬಿಎಂಪಿ ಕಚೇರಿಗಳಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ನೋಂದಣಿ ಮಾಡಲು ಯಾವುದೇ ಶುಲ್ಕ ತೆಗೆದುಕೊಳ್ಳುವುದಿಲ್ಲ ಮತ್ತು ಯಾವುದೇ ಕಾಲಮಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಧಾರ್ ಲಿಂಗ್ ಆಗದ ಪಾಸ್ ಬುಕ್ ಗೂ ಹಣ ನೀಡಲಾಗುತ್ತದೆ. ಇದಕ್ಕಾಗಿ ಪಾಸ್ ಬುಕ್ ವೆರಿಫಿಕೇಷನ್ ನಡೆಸಲಾಗುತ್ತದೆ. ತಹಶೀಲ್ದಾರ್ ಇದರ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದರು.

1.28 ಕೋಟಿ ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ. ನಿಗದಿತ ಸಮಯ ಮೀರಿದ ಫಲಾನುಭವಿಗಳು ಸಂಜೆ 5 ಗಂಟೆ ಬಳಿಕ ಹಣ ಪಡೆದುಕೊಳ್ಳಬಹುದು ಎಂದರು.

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರನ್ನು ಕರೆಸಲಾಗುವುದು. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಗಸ್ಟ್ 16 ಇಲ್ಲವೇ 17ರಂದು ಯಜಮಾನಿ ಖಾತೆಗೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿ ವ್ಯಾಪ್ತಿ ಹೊರಗಿರುವ ಸರ್ಕಾರಿ ಪಿಂಚಣಿದಾರರು, ಕುಟುಂಬ ಸದಸ್ಯರಿಗೂ ಗೃಹಲಕ್ಷ್ಮಿ ಯೋಜನೆಯ ಉಪಯೋಗ ಪಡೆಯಬಹುದು. ಆದರೆ ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಯೋಜನೆಯ ಲಾಬ ದೊರೆಯುವುದಿಲ್ಲ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular