ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ನಾಡಿನ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ನೆಮ್ಮದಿಯ ನಾಳೆಗಳನ್ನು ಕಲ್ಪಿಸಿಕೊಡುವ ಉದ್ದೇಶದೊಂದಿಗೆ ಅರ್ಹ ಕುಟುಂಬಗಳ ಯಜಮಾನಿಯರು ತಪ್ಪದೇ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಉಚಿತವಾಗಿ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಅಧಿಕೃತ ‘ಪ್ರಜಾ ಪ್ರತಿನಿಧಿ’ ಸ್ವಯಂ ಸೇವಕರು ನಿಮ್ಮ ಮನೆ ಬಾಗಿಲಲ್ಲೇ ಉಚಿತವಾಗಿ ನೋಂದಣಿ ಮಾಡಲಿದ್ದಾರೆ ಎಂದಿದ್ದಾರೆ.
ಕನಿಷ್ಠ ನಿಬಂಧನೆ, ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಅತಿ ಹೆಚ್ಚು ಜನರಿಗೆ ಯೋಜನೆಯ ಲಾಭ ತಲುಪಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲು ನಿಮ್ಮೆಲ್ಲರ ಸಹಕಾರವಿರಲಿ ಎಂದು ಕೋರಿದ್ದಾರೆ.


