Friday, November 22, 2024
Google search engine
Homeಮುಖಪುಟಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ - ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ

ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ – ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ

ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಸಂಸದ ನಳೀನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ? ಎಂದು ಪ್ರಶ್ನಿಸಿದ್ದಾರೆ.

ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ.

May be an image of 2 people, slow loris and text that says "Nalinkumar Kateel @nalink... 18h ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ @INCKarnataka ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ @siddaramaiah ಅವರ ತಾತ್ಸಾರ ನೀತಿ ರುಜುವಾತಾಗಿದೆ."
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular