Friday, November 22, 2024
Google search engine
Homeಮುಖಪುಟತುಮಕೂರು - ಕಳೆದ ವರ್ಷ ಅಪಘಾತದಲ್ಲಿ 762 ಜನರು ಸಾವು

ತುಮಕೂರು – ಕಳೆದ ವರ್ಷ ಅಪಘಾತದಲ್ಲಿ 762 ಜನರು ಸಾವು

ಕಳೆದ ವರ್ಷ ತುಮಕೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ 762 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಜತೆಗೆ ತುಮಕೂರು ಜಿಲ್ಲೆಯಲ್ಲೇ ಅತಿಹೆಚ್ಚು ಸಾವು ಸಂಭವಿಸಿದೆ. ಮೂರ್ನಾಲ್ಕು ಹೆದ್ದಾರಿ ಇರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು ಎಂದು ಸಂಚಾರ ಮತ್ದತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ಭೇಟಿ ನೀಡಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ,
ಚಾಲಕರು ಓವರ್ ಸ್ಪೀಡ್, ಕುಡಿದು ವಾಹನ ಚಲಾಯಿಸದೇ ಎಚ್ಚರಿಕೆ ವಹಿಸಬೇಕು. ಆದರೆ ಎಚ್ಚರಿಕೆ ವಹಿಸದೇ ಇರುವುದರಿಂದ ಸುಮ್ಮನೇ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಗಸ್ತು ವಾಹನಗಳಿಗೆ ರಸ್ತೆ ಸುರಕ್ಷತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿಯೊಬ್ಬರೂ ಸಹ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪೊಲೀಸರಿಗೆ ದಂಡ ವಸೂಲಿಯೇ ಪ್ರಮುಖ ಕರ್ತವ್ಯವಾಗದೆ ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಸೂಚನೆ ನೀಡಿದರು.

ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲೇನ್ ವಯೋಲೇಷನ್, ಡಿಸಿಪ್ಲೀನ್ ಸಲುವಾಗಿ ಟ್ರೈಯಲ್ ರನ್ ನಡೆಯುತ್ತಿದೆ. ಓವರ್ ಸ್ಪೀಡ್, ಸೀಟ್ ಬೆಲ್ಟ್ ಇಲ್ಲದೇ ವಾಹನ ಚಾಲನೆ, ಡ್ರೈವಿಂಗ್ ವೇಳೆ ಮೊಬೈಲ್ನಲ್ಲಿ ಮಾತನಾಡುವುದು ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸುವುದನ್ನು ಸೆರೆ ಹಿಡಿಯಲು ಈ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಸೆರೆ ಹಿಡಿಯಲು 8 ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಕ್ಯಾಮೆರಾ ಅಳವಡಿಸಲಾಗುತ್ತಿದೆ. ಇಡೀ ಎನ್ಹೆಚ್-4 ನಲ್ಲಿ ಒಟ್ಟು 72 ಕ್ಯಾಮೆರಾ ಅಳವಡಿಸಲಾಗಿದೆ ಎಂದರು.

ಮುಂದಿನ 15 ದಿನಗಳಲ್ಲಿ ದಂಡ ಹಾಕುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಒಂದು ದಿನಕ್ಕೆ ಸುಮಾರು 5 ಸಾವಿರ ಜನರು ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಇವರೆಲ್ಲರಿಗೂ ದಂಡ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಸಿ ಸರಿಪಡಿಸಲು 3 ತಿಂಗಳು ಸಮಯ ಕೊಡುತ್ತೇವೆ. ಆ ನಂತರ ಅಪಘಾತಗಳು ಸಂಭವಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರದ್ದು ತಪ್ಪು ಕಾಣಿಸಿದರೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಎಸ್ಪಿ ರಾಹುಲ್ ಕುಮಾರ್ ಶಹಪೂರ್ವಾಡ್, ಅಡಿಷನಲ್ ಎಸ್ಪಿ ಮರಿಯಪ್ಪ, ಪ್ರೊಭೆಷನರಿ ಐಪಿಎಸ್ ಅಧಿಕಾರಿ ಸಿದ್ದಾರ್ಥ ಗೋಯಲ್, ಡಿವೈಎಸ್ಪಿ ಶ್ರೀನಿವಾಸ್ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular