Thursday, January 29, 2026
Google search engine
Homeಮುಖಪುಟರಾಹುಲ್ ಗಾಂಧಿ ಪ್ರಕರಣ - ಮಹಾತ್ಮಗಾಂಧಿ ತತ್ವ ಸಿದ್ದಾಂತಕ್ಕೆ ಸಿಕ್ಕ ಜಯ - ಬಿ.ಕೆ.ಹರಿಪ್ರಸಾದ್

ರಾಹುಲ್ ಗಾಂಧಿ ಪ್ರಕರಣ – ಮಹಾತ್ಮಗಾಂಧಿ ತತ್ವ ಸಿದ್ದಾಂತಕ್ಕೆ ಸಿಕ್ಕ ಜಯ – ಬಿ.ಕೆ.ಹರಿಪ್ರಸಾದ್

ಎಐಸಿಸಿ ನಾಯಕ ರಾಹುಲ್ ಗಾಂಧಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಮಹಾತ್ಮ ಗಾಂಧಿಯವರ ತತ್ವ ಸಿದ್ದಾಂತಕ್ಕೆ ಸಿಕ್ಕ ಜಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಆಧಾರದ ಮೇಲೆ ಗುಜರಾಥ್ ಕೋರ್ಟ್ ತೀರ್ಪು ಕೊಟ್ಟಿತ್ತು. ರಾಹುಲ್ ಗಾಂಧಿ ಅವರನ್ನು ತರಾತುರಿಯಲ್ಲಿ ಸಂಸದ ಸ್ಥಾನದಿಂದಲೂ ಕೈ ಬಿಡಲಾಗಿತ್ತು. ಎರಡು ವರ್ಷ ಜೈಲು ಶಿಕ್ಷೆ ನೀಡಿರುವುದರ ಹಿಂದೆ ದ್ವೇಷ ರಾಜರಾರಣವಿತ್ತು. ಇದರ ವಿರುದ್ಧ ಇಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ ತೀರ್ಪು ನೀಡಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯವರು ಸುಳ್ಳು ಮತ್ತು ಅಸತ್ಯದ ಸಿದ್ದಾಂತಕ್ಕೆ ಸೋಲಾಗಿದೆ. ರಾಹುಲ್ ಗಾಂಧಿ ಅವರು ನಡೆಸಿದ ಭಾರತ್ ಜೋಡೋ ಯಾತ್ರೆಯ ಸಿದ್ದಾಂತ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ಅರ್ಥ, ಸುಳ್ಳು ತುಂಬಾ ದಿನ ಇರಲ್ಲ ಎನ್ನುವುದಕ್ಕೆ ಸಾಕ್ಷಿ. ಬಿಲ್ಕಿಸ್ ಭಾನು ಪ್ರಕರಣ ಗುಜರಾತ್ ಮಾದರಿಯದ್ದು, ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಿದ್ದು ಕೂಡ ಗುಜರಾತ್ ಮಾದರಿ ರಾಜಕೀಯದ ಉದಾಹರಣೆಗಳು ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವಕ್ಕಾಗಿ ಆಗ್ರಹ ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಒಳ್ಳೆಯ ಕ್ರಮ ವಹಿಸಲಿದ್ದಾರೆ ಅಂತ ಭಾವಿಸಿದ್ದೇವೆ. ಲೋಕಸಭೆ ಸ್ಪೀಕರ್ ಯಾವ ರೀತಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ನೋಡಬೇಕಿದೆ ಎಂದಿದ್ದಾರೆ.

ಮಹಿಳೆಯರಿಗೆ ರಕ್ಷಣೆ ಕೊಡೋದ್ರಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ. ಮಣಿಪುರ ಘಟನೆ ಸೇರಿದಂತೆ ಅನೇಕ ತೀರ್ಪುಗಳು ಕೇಂದ್ರದ ವಿರುದ್ಧವೇ ಬರುತ್ತಿವೆ. ನಿರ್ಭಯ ಪ್ರಕರಣದಿಂದ ಅವರು ಒಳಗೆ ಬಂದು, ಮಣಿಪುರ ಪ್ರಕರಣದಿಂದ ಎಗ್ಸಿಟ್ ಆಗಿದ್ದು ನಿಜ. ಇಡೀ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಘನಘೋರ ದೌರ್ಜನ್ಯ ನಡೆಯುತ್ತಿದೆ. ಮಣಿಪುರವೇ ಹೊತ್ತಿ ಉರಿಯುತ್ತಿದೆ. ಪ್ರಧಾನಿಗಳು ಮಾತ್ರ ಮೌನವಾಗಿದ್ದಾರೆ. ಮನ್ ಕೀ ಬಾತ್ ನಲ್ಲಿ ಮಾತಾಡುತ್ತಿದ್ದಾಎ. ಇದೆಲ್ಲ ನೋಡಿದ್ರೆ ಮೌನಂ ಸಮ್ಮತಿ ಲಕ್ಷಣಂ ಅನ್ನುವಂತಿದೆ. ಇಂತಹ ಘಟನೆಗಳು ಯಾವ ರೀತಿ ಪರಿಣಾಮ ಬೀರಲಿವೆ ನೋಡಬೇಕು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular