Friday, September 20, 2024
Google search engine
Homeಮುಖಪುಟಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಬೆಂಕಿ ದುರುಂತ - 10 ಮಂದಿಗೆ ಗಂಭೀರ ಗಾಯ

ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಬೆಂಕಿ ದುರುಂತ – 10 ಮಂದಿಗೆ ಗಂಭೀರ ಗಾಯ

ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಬೆಂಕಿ ದುರಂತ ಸಂಭವಿಸಿ 10 ಮಂದಿ ನೌಕರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿ ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅರ್ಧ ಗಂಟೆ ತಡವಾಗಿದೆ. ಆಂಬುಲೆನ್ಸ್ ಬರುವವರೆಗೂ ಸ್ಥಳೀಯರು ಗಾಯಾಳುಗಳಿಗೆ ಗಾಳಿ ಬೀಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಘಟನಾ ಸ್ಥಳಕ್ಕೆ ಆಗ್ನಿಶಾಮಕ ದಳದ ವಾಹನಗಳು ಮತ್ತು ಸಿಬ್ಬಂದಿ ಅರ್ಧ ಗಂಟೆ ತಡವಾಗಿ ಬಂದವು. ಇದರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ತಡವಾಯಿತು ಎಂದು ಹೇಳಲಾಗಿದೆ.

ಗಾಯಾಳುಗಳನ್ನು ಛೀಪ್ ಇಂಜಿನಿಯರ್ ಶಿವಕುಮಾರ್, ಇಂಜಿನಿಯರ್ ಗಳಾದ ಸಂತೋಷ್ ಕುಮಾರ್, ವಿಜಯಲಕ್ಷ್ಮೀ, ಶ್ರೀಧರ್, ಜ್ಯೋತಿ, ಶ್ರೀನಿವಾಸ್, ಕಂಪ್ಯೂಟರ್ ಆಪರೇಟರ್ ಮನೋಜ್, ಇಇ ಕಿರಣ್, ಎಫ್.ಡಿ.ಎ ಸಿರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ಷಣ ತಂಡಗಳು ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಟ್ಟಿದ್ದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.

ಬೆಂಕಿ ದುರಂತಕ್ಕೆ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular