Wednesday, December 4, 2024
Google search engine
Homeಮುಖಪುಟಬಿಜೆಪಿಯಲ್ಲಿ ನೆಮ್ಮದಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ - ಶಾಸಕ ಎಸ್.ಟಿ. ಸೋಮಶೇಖರ್

ಬಿಜೆಪಿಯಲ್ಲಿ ನೆಮ್ಮದಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ – ಶಾಸಕ ಎಸ್.ಟಿ. ಸೋಮಶೇಖರ್

ಬಿಜೆಪಿಯಲ್ಲಿ ನೆಮ್ಮದಿಯಾಗಿ ಕೆಲಸ ಮಾಡಲು ಕೆಲವರು ಬಿಡುತ್ತಿಲ್ಲ. ಅಂಥವರ ವಿರುದ್ಧ ಕ್ರಮಕೈಗೊಳ್ಳುವಂತೆ ಪಕ್ಷಕ್ಕೆ ತಿಳಿಸಿದ್ದೆ. ಆದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗ ಎಂಬ ಚಿಂತನೆ ಜಾಸ್ತಿಯಾಗುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ಕೆಲವರು ಪ್ರೊಪಗಾಂಡ ಸಿದ್ದಪಡಿಸಿದ್ಧಾರೆ. ವಿಧಾನಸಭಾ ಚುನಾವಣೆಯಲ್ಲೂ ಈ ವಿಚಾರ ಹರಿಬಿಟ್ಟಿದ್ದರು. ಈ ಬಗ್ಗೆ ಯಡಿಯೂರಪ್ಪ, ಸಿಟಿ ರವಿ ಹಾಗೂ ಬೊಮ್ಮಾಯಿ ಅವರ ಗಮನಕ್ಕೆ ತಂದಿರುವೆ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಬೇಕು ಎಂದು ಎಲ್ಲರಿಗೂ ಮನವಿ ಮಾಡಿದ್ದೇನೆ. ಯಡಿಯೂರಪ್ಪ ಅವರು ನನ್ನನ್ನು ಬಿಜೆಪಿಗೆ ಕರೆ ತಂದಿದ್ದಾರೆ. ಅವರನ್ನು ಮೀರಿ ಯಾವ ಕೆಲಸವನ್ನು ಮಾಡುವುದಿಲ್ಲ. ಭೇಟಿಯಾಗಲು ತಿಳಿಸಿದ್ದಾರೆ ಎಂದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular