Monday, September 16, 2024
Google search engine
Homeಮುಖಪುಟಚಂದ್ರಯಾನ-3 ಯಶಸ್ವಿ - ಇಸ್ರೋ ವಿಜ್ಞಾನಿಗಳ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಚಂದ್ರಯಾನ-3 ಯಶಸ್ವಿ – ಇಸ್ರೋ ವಿಜ್ಞಾನಿಗಳ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಚಂದ್ರಯಾನ-3 ಯೋಜನೆಯ ಯಶಸ್ಸಿನ ಹಿಂದಿರುವ ಶಕ್ತಿಗಳು. ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರದ ಮೇಲೆ ಇಳಿದ ಕ್ಷಣದಿಂದ ಇಡೀ ವಿಶ್ವವೇ ಇವರ ಸಾಧನೆಯನ್ನು ಕೊಂಡಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಆಗಸ್ಟ್ 24ರಂದು ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿ, ಸಹಿ ತಿನ್ನಿಸಿದ ಅವರು, ಇಂಥದ್ದೊಂದು ಅಸಾಧಾರಣ ಸವಾಲನ್ನು ಸಾಧ್ಯವಾಗಿಸಿ ಐತಿಹಾಸಿಕ ಸಾಧನೆ ಮಾಡಿದ ನಮ್ಮ ಹೆಮ್ಮೆಯ ವಿಜ್ಞಾನಿ ಮಿತ್ರರ ಪರಿಶ್ರಮ ಮತ್ತು ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಇಡೀ ವಿಶ್ವವೇ ಗುರುತಿಸಿ ಕೊಂಡಾಡುತ್ತಿರುವ ಇಸ್ರೋ ಸಂಸ್ಥೆ ನಮ್ಮ ಕರ್ನಾಟಕದ ನೆಲದಲ್ಲಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ ಎಂದು ಕೊಂಡಾಡಿದ್ದಾರೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿರುವ ಇಸ್ರೋ ಮುಂದಿನ ದಿನಗಳಲ್ಲಿ ಮಾನವ ಸಹಿತ ಚಂದ್ರಯಾನ ಹಾಗೂ ಸೌರಗ್ರಹ ಯಾನಗಳನ್ನೂ ಸಾಧಿಸಿ ಭಾರತೀಯರ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದ ಕ್ಷಣ ಅವಿಸ್ಮರಣೀಯ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೇಶದ ಪ್ರಗತಿಯ ರಭಸವನ್ನು ಉನ್ನತೀಕರಿಸಿದ ಇಸ್ರೋ ವಿಜ್ಞಾನಿಗಳ ತಂಡವನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular