Friday, October 18, 2024
Google search engine
Homeಮುಖಪುಟವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ 'ಶಿವಶಕ್ತಿ' ಎಂದು ನಾಮಕರಣ ಮಾಡಿದ ಪ್ರಧಾನಿ ಮೋದಿ

ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ ಪ್ರಧಾನಿ ಮೋದಿ

ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ದೃವ ಪ್ರದೇಶದಲ್ಲಿ ಇಳಿಸಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದೂ ಚಂದ್ರಯಾನ-2 ಇಳಿದ ಜಾಗಕ್ಕೆ ‘ತಿರಂಗಾ’ ಎಂದು ನಾಮಕರಣ ಮಾಡಲಾಗಿದೆ.

ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಶ್ಲಾಘಿಸಿದರು. ಅಷ್ಟೇ ಅಲ್ಲ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವುದಕ್ಕೆ ವಿಜ್ಞಾನಿಗಳನ್ನು ಅಭಿನಂದಿಸಿದರು.

ಇಸ್ರೋ ವಿಜ್ಞಾನಿಗಳು ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧೃವ ಪ್ರದೇಶಕ್ಕೆ ಇಳಿಸಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು, ಚಂದ್ರಯಾನ-2 ಇಳಿದ ಜಾಗಕ್ಕೆ ತಿರಂಗ ಎಂದು ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular