Friday, September 20, 2024
Google search engine
Homeಮುಖಪುಟಎಸ್ಎಸ್ಎಲ್.ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೂರು ವಾರ್ಷಿಕ ಪರೀಕ್ಷೆ - ಸಚಿವ ಮಧು ಬಂಗಾರಪ್ಪ

ಎಸ್ಎಸ್ಎಲ್.ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೂರು ವಾರ್ಷಿಕ ಪರೀಕ್ಷೆ – ಸಚಿವ ಮಧು ಬಂಗಾರಪ್ಪ

ಇನ್ನು ಮುಂದೆ ಎಸ್ಎಸ್ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್.ಸಿ ಮತ್ತು ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದಾಗಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ಪರೀಕ್ಷಾ ಪದ್ದತಿಯಲ್ಲಿ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಇದು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಒತ್ತಡ ಮತ್ತು ಆತಂಕವನ್ನು ಸೃಷ್ಟಿಸಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿ ಕುಂಟಿತವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಈಗಿನ ವ್ಯವಸ್ಥೆಯನ್ನು ಬದಲಾಯಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular