Friday, November 22, 2024
Google search engine
Homeಮುಖಪುಟಪ್ರಧಾನಿ ಮೋದಿ ಕೇವಲ ನೇಮ್ ಚೇಂಜರ್ - ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಪ್ರಧಾನಿ ಮೋದಿ ಕೇವಲ ನೇಮ್ ಚೇಂಜರ್ – ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ! ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, 2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು ಎಂದು ಹೇಳಿದ್ದಾರೆ.

ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ! ಎಂದು ಟೀಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular