2024ರ ಲೋಕಸಭಾ ಚುನಾವಣೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದು ರಾಜಕೀಯವಾಗಿ ಬಿಸಿ ಏರಿದೆ.
ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಹಿರಿಯ ನಾಯಕ, ಚುನಾವಣಾ ತಿಳುವಳಿಕೆಯ ಭಾಗವಾಗಿ ಒಟ್ಟು 28 ಕ್ಷೇತ್ರಗಳನ್ನು ಹೊಂದಿರುವ ಕರ್ನಾಟಕದಲ್ಲಿ ಜೆಡಿಎಸ್ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಪರಸ್ಪರ ಒಪ್ಪಿಗೆ ವ್ಯಕ್ತಪಡಿಸವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಲ್ಕು ಲೋಕಸಭಾ ಸ್ಥಾನಗಳನ್ನು ಜೆಡಿಎಸ್ ಗೆ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯಡಿಯೂರಪ್ಪ ಇದು ನಮಗೆ ಹೆಚ್ಚಿನ ಶಕ್ತಿಯನ್ನು ನೀಡಿದೆ. ಇದು 25 ಅಥವಾ 26 ಲೋಕಸಭಾ ಸ್ಥಾನಗಳನ್ನು ಒಟ್ಟಾಗಿ ಗೆಲ್ಲಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಇತ್ತೀಚೆಗಷ್ಟೇ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು.